Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:37 AM Tuesday 26-October 2021

ವಿರಾಜಪೇಟೆ : ಮನೆಗೆ ನುಗ್ಗಿದ್ದ ಚೋರ 48 ಗಂಟೆಗಳಲ್ಲಿ ಪೊಲೀಸರ ಅತಿಥಿ

11/10/2021

ವಿರಾಜಪೇಟೆ ಅ.11 : ಪಟ್ಟಣದ ಮನೆಯೊಂದಕ್ಕೆ ನುಗ್ಗಿ ಟಿವಿ ಹಾಗೂ ನಗದು ದೋಚಿದ್ದ ಚೋರನನ್ನು ಕಳ್ಳತನ ನಡೆದ 48 ಗಂಟೆಗಳಲ್ಲಿ ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲ್ಲುಬಾಣೆಯ ನಿವಾಸಿ ಕೂಲಿ ಕಾರ್ಮಿಕ ಕೆ.ಎಸ್.ನಿಖಿಲ್ (22) ಬಂಧಿತ ಆರೋಪಿಯಾಗಿದ್ದು, ಟಿವಿ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ಪಟ್ಟಣದ ನಿವಾಸಿ ಸುಬ್ಬಯ್ಯ ಎಂಬುವವರು ಅ.7 ರಂದು ಹೊಳೆನರಸೀಪುರಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯನ್ನು ಗಮನಿಸಿ ಹಿಂಬಾಗಿಲನ್ನು ಮುರಿದು ಒಳ ನುಗ್ಗಿದ ನಿಖಿಲ್ ಟಿವಿ ಹಾಗೂ ರೂ.1,400 ನ್ನು ದೋಚಿ ಪರಾರಿಯಾಗಿದ್ದ. ಅ.8 ರಂದು ಮನೆಗೆ ಬಂದ ಸುಬ್ಬಯ್ಯ ಅವರು ಕಳ್ಳತನವಾಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದರು.
ಶ್ವಾನದಳ ಮತ್ತು ಬೆರಳಚ್ಚು ತಜ್ಞರ ಸಹಕಾರದಿಂದ ತನಿಖೆ ಕೈಗೊಂಡ ಪೊಲೀಸರು ಅ.10 ರಂದು ಬೆಳಗ್ಗೆ ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಿಖಿಲ್ ನನ್ನು ಬಂಧಿಸಿದರು. ತಪ್ಪೊಪ್ಪಿಕೊಂಡ ಈತನ ಬಳಿಯಿಂದ ಟಿವಿ ಮತ್ತು 1,400 ರೂ. ನಗದನ್ನು ವಶಕ್ಕೆ ಪಡೆಯಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿ.ವೈ.ಎಸ್ಪಿ ನಿರ್ದೇಶನದಲ್ಲಿ ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್ ನೇತೃತ್ವದಲ್ಲಿ ವಿರಾಜಪೇಟೆ ನಗರ ಠಾಣೆಯ ಅಪರಾಧ ವಿಭಾಗದ ಉಪನಿರೀಕ್ಷಕ ಹೆಚ್.ಎಸ್.ಬೋಜಪ್ಪ, ನಗರ ಠಾಣಾಧಿಕಾರಿಗಳಾದ ಜಗದೀಶ್ ಧೂಳ ಶೆಟ್ಟಿ, ಜಿಲ್ಲಾ ಬೆರಳಚ್ಚು ವಿಭಾಗದ ಜಯಕುಮಾರ್, ಸಿಬ್ಬಂದಿಗಳಾದ ಪಿ.ಯು.ಮುನೀರ್, ರಂಜನ್ ಕುಮಾರ್, ಮಧು ಟಿ.ಟಿ. ಗೀತಾ, ಮೋಹನ್ ಟಿ.ಕೆ.ಸಾಗರ್, ಮಂಜುನಾಥ್ ಬಿ.ವಿ ಹಾಗೂ ಮಹಂತೇಶ್ ಎಂ.ಪಿ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. (ವರದಿ : ಕಿಶೋರ್ ಶೆಟ್ಟಿ)