Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:54 PM Tuesday 26-October 2021

ಅಯ್ಯಂಗೇರಿ ಪ್ರಕರಣ : ಮೃತೆಯ ಪತಿ ಪೊಲೀಸ್ ವಶ

11/10/2021

ಮಡಿಕೇರಿ ಅ.11 : ಇತ್ತೀಚೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಯ್ಯಂಗೇರಿ ಗ್ರಾಮದ ನಿವಾಸಿ ಎಂ.ಎಸ್.ಮೊಹಮ್ಮದ್ ಹಾಗೂ ಅಲೀಮಾ ದಂಪತಿಗಳ ಪ್ರಥಮ ಪುತ್ರಿ ಎಂ.ಎಂ.ಅಮೀರಾ (21) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರುವೈಜ್ ಕೆ.ಎ ಯನ್ನು ಮಡಿಕೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಮಡಿಕೇರಿ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ.
ವರದಕ್ಷಿಣೆ ಕಿರುಕುಳ ಮಹಿಳೆಯ ಸಾವಿಗೆ ಕಾರಣವೆಂದು ಆರೋಪಿಸಿ ಪೋಷಕರು ದೂರು ನೀಡಿದ ನಂತರ ಅಮೀರಾಳ ಪತಿ, ಮಾವ ಹಾಗೂ ಅತ್ತೆ ನಾಪತ್ತೆಯಾಗಿದ್ದರು. ಇವರುಗಳನ್ನು ಬಂಧಿಸಬೇಕೆದು ಒತ್ತಾಯಿಸಿ ಅಮೀರಾಳ ತಾಯಿ ಅಲೀಮಾ ಇತ್ತೀಚೆಗೆ ಡಿವೈಎಸ್‌ಪಿಗೆ ದೂರು ನೀಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರು ಪತಿ ರುವೈಜ್ ನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಅತ್ತೆ, ಮಾವನ ಸುಳಿವು ದೊರೆತ್ತಿಲ್ಲವೆಂದು ತಿಳಿದು ಬಂದಿದೆ. ಪೊಲೀಸ್ ತನಿಖೆ ಮುಂದುವರೆದಿದೆ.