Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:42 AM Tuesday 26-October 2021

ಅ.20 ರಂದು ಮಹರ್ಷಿ ವಾಲ್ಮೀಕಿ ಜಯಂತಿ

13/10/2021

ಮಡಿಕೇರಿ ಅ.13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್, 20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಪಡೆ ಸಮಿತಿ ಅಧ್ಯಕ್ಷರಾದ ಎಸ್. ರವಿ ಕುಶಾಲಪ್ಪ, ಮುಖ್ಯ ಭಾಷಣಕಾರರಾಗಿ ಎ.ಎನ್. ರವಿ ಅವರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಮಿಶ್ರಾ, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಕೆ.ಶ್ರೀನಿವಾಸ್ ಇತರರು ಪಾಲ್ಗೋಳ್ಳಲಿದ್ದಾರೆ.