Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:57 PM Tuesday 26-October 2021

ಅ.20 ರಂದು ಕೊಡವ ಭಾಷೆ ಮತ್ತು 8 ನೇ ಪರಿಚ್ಛೇದ ಕೂಟ್‍ಕ್ ಪುಸ್ತಕ ಬಿಡುಗಡೆ

13/10/2021

ಮಡಿಕೇರಿ ಅ.13 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಮೈಸೂರು ಕೊಡವ ಸಮಾಜ ಇವರ ಸಹಯೋಗದಲ್ಲಿ ಅಕ್ಟೋಬರ್, 20 ರಂದು ಬೆಳಗ್ಗೆ 10.30 ಗಂಟೆಗೆ ಮೈಸೂರಿನ ಕೊಡವ ಸಮಾಜದಲ್ಲಿ “ಕೊಡವ ಭಾಷೆ ಮತ್ತು ಎಂಟನೇ ಪರಿಚ್ಛೇದ ಹಾಗೂ ಪುಸ್ತಕ ಬಿಡುಗಡೆ” ಸಮಾರಂಭ ಕಾರ್ಯಕ್ರಮ ನಡೆಯಲಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಅಕಾಡೆಮಿಯ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಮಂಡೇಪಂಡ ಅಪ್ಪಚ್ಚುರಂಜನ್, ಶಾಂತೆಯಂಡ ವೀಣಾ ಅಚ್ಚಯ್ಯ, ಪಶ್ವಿಮಘಟ್ಟ ಅರಣ್ಯ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಮೈಸೂರು ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದಲ್ಲಿರುವ ಡಾ.ಆರ್.ಚಲಪತಿ ಹಾಗೂ ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಕೇಕಡ ಬೆಳ್ಯಪ್ಪ ಅವರು ಭಾಗವಹಿಸಲಿದ್ದಾರೆ.
ವಿರಾಜಪೇಟೆ ಪೂಮಾಲೆ ವಾರಪತ್ರಿಕೆಯ ಸಂಪಾದಕರಾಗಿರುವ ಅಜ್ಜಿನಿಕಂಡ ಮಹೇಶ್ ನಾಚಯ್ಯ ಇವರು “8 ನೇ ಪರಿಚ್ಛೇದ ಪಿಂಞ ಕೊಡವ ತಕ್ಕ್” ಎಂಬ ವಿಷಯದ ಬಗ್ಗೆ ವಿಚಾರಮಂಡಿಸಲಿದ್ದಾರೆ. ಹಾಗೂ ಈ ಕಾರ್ಯಕ್ರಮದ ಜೊತೆಗೆ ಶ್ರೀ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ- ಮೀದಿಬೆಪ್ಪೊ, ಮೊಣ್ಣಂಡ ಶೋಭಾ ಸುಬ್ಬಯ್ಯ ಅವರು ಬರೆದಿರುವ-ನಲ್ಲಾಮೆ, ಚೊಟ್ಟೆಯಾಂಡಮಾಡ ಲಲಿತ ಕಾರ್ಯಪ್ಪ ಅವರು ಬರೆದಿರುವ-ಪೊನ್ನ್‍ರಂತ ತಕ್ಕ್ ಮತ್ತು ಬಾಚಮ್ಮಂಡ ಗೌರಮ್ಮ ಮಾದಮ್ಮಯ್ಯ ಅವರು ಬರೆದಿರುವ-ಸಂಪೂರ್ಣ ಮಹಾಭಾರತ ಚೋದ್ ಚೋದ್ಯ ಎಂಬ ಪುಸ್ತಕಗಳ ಬಿಡುಗಡೆ ಸಮಾರಂಭ ನಡೆಯಲಿದೆ. ಅಕಾಡೆಮಿ ಪ್ರಕಟಿತ ಪುಸ್ತಕಗಳು ಹಾಗೂ ಸಿ.ಡಿ ಗಳ ಮಾರಾಟ ಮತ್ತು ಪ್ರದರ್ಶನ ಇರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದ ಸಂದರ್ಭದಲ್ಲಿ ಕೊಡವ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಾನ್ಯ ಕನ್ನಡ ಮತ್ತು ಸಂಸ್ಕøತಿ ಸಚಿವರು ಮತ್ತು ಸಂಸದರಿಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಲಾಗುವುದು.