Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:39 PM Tuesday 26-October 2021

ಅ.15 ರಂದು ಅರೆಭಾಷೆ ಸಂಸ್ಕೃತಿ ಶಿಬಿರ

13/10/2021

ಮಡಿಕೇರಿ ಅ.13 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಪೈಲಾರು ಶೌರ್ಯ ಯುವತಿ ಮಂಡಳ ಮತ್ತು ಚೊಕ್ಕಾಡಿ ಮುನ್ನೂರೊಕ್ಲು ಗೌಡ ಬಾಂಧವರ ಸಮಿತಿ ಸಹಯೋಗದಲ್ಲಿ ಅಕ್ಟೋಬರ್, 15 ರಂದು ಬೆಳಗ್ಗೆ 10 ಗಂಟೆಗೆ ಅರೆಭಾಷೆ ಸಂಸ್ಕೃತಿ ಶಿಬಿರವು ಸುಳ್ಯ ತಾಲ್ಲೂಕಿನ ಪೈಲಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಲಿದೆ.
ಚೊಕ್ಕಾಡಿ ಮುನ್ನೋರೊಕ್ಲು ಮಾಗಣಿ ಗೌಡ್ರು ವೆಂಕಟ್ರಮಣ ಕರ್ಮಾಜೆ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಮಾಜಿ ಸದಸ್ಯರಾದ ಅಣ್ಣಾಜಿ ಗೌಡ ಪೈಲೂರು, ಚೊಕ್ಕಾಡಿ ಮುನ್ನೂರೊಕ್ಲು ಗೌಡ ಬಾಂಧವರ ಸಮಿತಿ ಗೌರವಾಧ್ಯಕ್ಷರಾದ ಪುಟ್ಟಣ ಗೌಡ ಪೈಲೂರು, ಅಮರಮುಡ್ನೂರು ಗ್ರಾ.ಪಂ.ಅಧ್ಯಕ್ಷರಾದ ಪದ್ಮಪ್ರಿಯಾ, ಪೈಲಾರ್ ಸ.ಹಿ.ಪ್ರಾ.ಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯೋಗೀಶ್ ಮಾಡಬಾಕಿಲು ಇತರರು ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್, 17 ರಂದು ಮಧ್ಯಾಹ್ನ 2.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ, ಇತರರು ಪಾಲ್ಗೊಳ್ಳಲಿದ್ದಾರೆ.