Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:08 PM Tuesday 26-October 2021

ಸೋಮವಾರಪೇಟೆ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ರೂ.2.50 ಲಕ್ಷ ಅನುದಾನ ಬಿಡುಗಡೆ

13/10/2021

ಸೋಮವಾರಪೇಟೆ ಅ.13 : ಜೀರ್ಣೋದ್ದಾರಗೊಳ್ಳುತ್ತಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2.50 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನುದಾನದ ಚೆಕ್‌ನ್ನು ದೇವಾಲಯ ಸಮಿತಿಗೆ ಹಸ್ತಾಂತರಿಸಲಾಯಿತು.
ಆoಜನೇಯ ದೇವಾಲಯದ ನಿರ್ಮಾಣ ಕಾರ್ಯ ಈಗಾಗಲೇ ಪ್ರಗತಿಯಲ್ಲಿದ್ದು, ಶ್ರೀಕ್ಷೇತ್ರದಿಂದ ಬಿಡುಗಡೆಯಾದ ಅನುದಾನದ ಚೆಕ್‌ನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಯೋಗೇಶ್ ಅವರು, ಶಾಸಕ ಅಪ್ಪಚ್ಚು ರಂಜನ್ ಅವರ ಮೂಲಕ ದೇವಾಲಯ ಸಮಿತಿಗೆ ನೀಡಿದರು.
ಈ ಸಂದರ್ಭ ದೇವಾಲಯ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸೀತಾರಾಮ್, ಪ್ರಮುಖರಾದ ನಂದಕುಮಾರ್, ಅಭಿಮನ್ಯುಕುಮಾರ್, ಯೋಜನೆಯ ಯೋಜನಾಧಿಕಾರಿ ರೋಹಿತ್‌ಕುಮಾರ್, ಮೇಲ್ವಿಚಾರಕ ಸಂತೋಷ್‌ಕುಮಾರ್, ಸೇವಾ ಪ್ರತಿನಿಧಿ ಬಿಂದು, ಪವನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.