190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ…

16/10/2021

ಮಂಗಳೂರು ಅ.16 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು.

ಒಟ್ಟು ಹುದ್ದೆಗಳು : 190
ಹುದ್ದೆ ಹೆಸರು: ಪೌರಕಾರ್ಮಿಕರು (ಗ್ರೂಪ್ ಡಿ)
ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

: ಅರ್ಹತೆ :

ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ಕನ್ನಡ ಮಾತನಾಡಲು ಗೊತ್ತಿರಬೇಕು.
ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ 45 ವರ್ಷ ಮೀರಿರಬಾರದು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000-ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

:: ಅರ್ಜಿ ಸಲ್ಲಿಕೆ ವಿಧಾನ ::
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.  ಅಭ್ಯರ್ಥಿಗಳು ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್‌ಸೈಟ್ http://dakshinakannadadudc.mrc.gov.in/kn/recuritment  ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.

:: ಅರ್ಜಿ ಶುಲ್ಕ ::
ಪರಿಶಿಷ್ಠ ಜಾತಿ/ಪರಿಶಿಷ್ಠ .ಪಂಗಡ./ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳು ರೂ. 100, ಉಳಿದ ಅಭ್ಯರ್ಥಿಗಳು ರೂ. 200 ಪಾವತಿಸಬೇಕು.

:: ಶುಲ್ಕ ಪಾವತಿಸುವ ವಿಧಾನ :: 
ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್ ನಲ್ಲಿ ಲಭ್ಯವಿರುವ PDF ಚಲನ್ ಅನ್ನು ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕ ಪಾವತಿ ಮಾಡತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 23, 2021

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
http://dakshinakannadadudc.mrc.gov.in/kn/recuritment