ಅಂಗಡಿಯಲ್ಲಿ ಅಕ್ರಮ ಗೋಮಾಂಸ ಮಾರಾಟ : ಓರ್ವನ ಬಂಧನ

17/10/2021

ಮಡಿಕೇರಿ ಅ.17 : ರಾಜ್ಯದಲ್ಲಿ ಗೋಮಾಂಸ ಮಾರಾಟ ನಿಷೇಧವಿದ್ದರೂ ರಾಜಾರೋಷವಾಗಿ ಅಂಗಡಿಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಅರಕಲಗೋಡು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸಂತೇಮರೂರು ರಸ್ತೆಯಲ್ಲಿ ಬನ್ನಿ ಮಂಟಪದ ಎದುರು ಅಂಗಡಿಯಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದರು. ಬಕಾಷ್ ಎಂಬಾತನನ್ನು ಬಂಧಿಸಿ ಗೋಮಾಂಸವನ್ನು ವಶಕ್ಕೆ ಪಡೆದರು.
ಅರಕಲಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.