ಸುಂಟಿಕೊಪ್ಪ : ಬಾಲಕಿಗೆ ಲೈಂಗಿಕ ಕಿರುಕುಳ : ಪೋಕ್ಸೊ ಕಾಯ್ದೆಯಡಿ ಬಂಧನ

21/10/2021

ಮಡಿಕೇರಿ ಅ.21 : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.
ಹಂಸ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಸಂತ್ರಸ್ತ ಬಾಲಕಿಗೆ ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಕ್ಕದ ಮನೆಯ ಬಾಲಕಿ ಏಕಾಂಗಿಯಾಗಿರುವುದನ್ನು ಗಮನಿಸಿದ ಆರೋಪಿ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. 80 ರೂ.ನಗದನ್ನು ಕೂಡ ಬಾಲಕಿಗೆ ನೀಡಿದ್ದು, ವಿಷಯ ತಿಳಿದ ಮನೆಯ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ.
ತಕ್ಷಣ ಸುಂಟಿಕೊಪ್ಪ ಪೊಲೀಸರು ಕಾರ್ಯಪ್ರವೃತ್ತರಾಗಿ ಹಂಸನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.