ಕೊಡಗಿನಲ್ಲಿ ಕೋವಿಡ್ : ಪಾಸಿಟಿವಿಟಿ ಪ್ರಮಾಣ ಶೇ.0.34

22/10/2021

ಮಡಿಕೇರಿ ಅ.22 : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 10 ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ಪ್ರಸ್ತುತ 95 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಶೇ.0.34 ರಷ್ಟಿದ್ದು, ಇಲ್ಲಿಯವರೆಗೆ ಒಟ್ಟು 428 ಸಾವು ಸಂಭವಿಸಿದೆ.
ಕಳೆದ 24 ಗಂಟೆಗಳಲ್ಲಿ ಮಡಿಕೇರಿ 1, ಸೋಮವಾರಪೇಟೆ 9  ಸೋಂಕಿತರು ಪತ್ತೆಯಾಗಿದ್ದಾರೆ. 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ  ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ.