ಮಹಾಮಳೆ ಅನಾಹುತ : ಅಪಾಯದಲ್ಲಿ ಐವರು ಪ್ರವಾಸಿಗರು

22/10/2021

ಡೆಹ್ರಾಡೂನ್ ಅ.22 : ಮಹಾಮಳೆಗೆ ಉತ್ತರಾಖಂಡ್ ತತ್ತರಿಸಿ ಹೋಗಿದ್ದು, ಕುಮೌನ್ ನ ಕಪ್‌ಕೋಟ್‌ನ ನಲ್ಲಿ ಐವರು ಪ್ರವಾಸಿಗರು ಸಿಲುಕಿಕೊಂಡಿದ್ದು, ಅಪಾಯವನ್ನು ಎದುರಿಸುತ್ತಿದ್ದಾರೆ.
ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 65 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಐವರು ಮೃತಪಟ್ಟಿದ್ದಾರೆ. ಪ್ರವಾಸಿಗರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಓರ್ವ ಪ್ರವಾಸಿಗ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹ ಮತ್ತು ಭೂಕುಸಿತದಿಂದ ಸುಮಾರು 7 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಹಿಮನದಿಯ ಬಳಿ ಕೆಲವು ಪ್ರವಾಸಿಗರು ಮೃತಪಟ್ಟಿರುವ ಬಗ್ಗೆಯೂ ಮಾಹಿತಿ ಲಭಿಸಿದೆ.