ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿದ ಟಿಪ್ಪರ್ : ಕೆದಕಲ್ ನಲ್ಲಿ ಘಟನೆ

22/10/2021

ಮಡಿಕೇರಿ ಅ.22 : ಕಲ್ಲು ತುಂಬಿದ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿದ ಘಟನೆ ಕೆದಕಲ್ ನಲ್ಲಿ ನಡೆದಿದೆ.
ಸುಂಟಿಕೊಪ್ಪದಿoದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಮಡಿಕೇರಿಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಸಂದರ್ಭ ಟಿಪ್ಪರ್ ಲಾರಿ ರಸ್ತೆಯ ಮಧ್ಯಭಾಗದಲ್ಲಿಯೇ ಮಗುಚಿಕೊಂಡಿತು. ಅದೃಷ್ಟವಶಾತ್ ಲಾರಿ ಮತ್ತು ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿ ತುಂಬಿದ್ದ ಕಲ್ಲುಗಳು ರಸ್ತೆಯಲ್ಲಿ ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.