ದಕ್ಷಿಣ ಕಾಶಿ ಎಂದು ಕರೆಯಲ್ಪಡುವ ಗಜೇಂದ್ರಗಡ

04/11/2021

ಉತ್ತರ ಕರ್ನಾಟಕ ಭಾಗದ ಗದಗ್ ಜಿಲ್ಲೆಯಲ್ಲಿರುವ ಗಜೇಂದ್ರಗಡವು  ಒಮ್ಮೆಯಾದರೂ ಭೇಟಿ ನೀಡಲೇಬೇಕಾದ ಸುಂದರ ಪ್ರವಾಸಿ ಆಕರ್ಷಣೆಯಾಗಿದೆ.

ಸಹಜ ಪ್ರಕೃತಿ ಸೌಂದರ್ಯದಿಂದ ಕೂಡಿದ ಈ ಸ್ಥಳವು ಪ್ರಧಾನವಾಗಿ ತನ್ನಲ್ಲಿರುವ ಕಾಲಕಾಲೇಶ್ವರ ದೇವಾಲಯದಿಂದಾಗಿ ಪ್ರಖ್ಯಾತವಾಗಿದೆ. ಇದನ್ನು ದಕ್ಷಿಣ ಕಾಶಿ ಎಂದೂ ಕೂಡ ಕರೆಯಲಾಗುತ್ತದೆ. ಇದೊಂದು ಬೃಹತ್ ಬೆಟ್ಟದ ಮೇಲೆ ಕೆತ್ತಲಾದ ಸುಂದರ ದೇವಾಲಯವಾಗಿದೆ.