ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

04/11/2021

ಮಡಿಕೇರಿ ನ.4 : ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ 1977 ರನ್ವಯ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿ ಇಲ್ಲಿಗೆ ನವೆಂಬರ್, 08 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜಿಲ್ಲಾ ಬಾರ್ ಅಸೋಸಿಯೇಷನಲ್ಲಿ ನೋಂದಾಯಿಸಿರಬೇಕು. ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಗಳಲ್ಲಿ ಇರಬಾರದು. ಯಾವುದೇ ನಿಗಮ ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರಬಾರದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.