ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆಗೆ ತರಬೇತಿ

06/11/2021

ಮಡಿಕೇರಿ ನ.6 :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ‘ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ’ಗೆ 45 ದಿನಗಳ ತರಬೇತಿ ಶಿಬಿರ ನಡೆಯಲಿದೆ.
ಆಸಕ್ತರು ನವೆಂಬರ್, 12 ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಅವರು ತಿಳಿಸಿದ್ದಾರೆ.