ಅಂಗನವಾಡಿ ಕಾರ್ಯಕರ್ತೆ ಹುದ್ದೆ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

11/11/2021

ಮಡಿಕೇರಿ ನ.11 : ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇದ್ದ 05 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು 15 ಸಹಾಯಕಿಯರ ಹುದ್ದೆಗೆ ನವೆಂಬರ್, 09 ರಂದು ಆಯ್ಕೆ ಪ್ರಕ್ರಿಯೆ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಆಕ್ಷೇಪಣೆ ಏನಾದರೂ ಇದ್ದಲ್ಲಿ ನವೆಂಬರ್, 16 ರ ಕಚೇರಿ ವೇಳೆ 5.30 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ದೂ.ಸಂ.6362211803 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.