ಮಡಿಕೇರಿಯಲ್ಲಿ ಬಿಜೆಪಿ ಬೆಂಬಲಿತರ ಸಮಾವೇಶ

22/11/2021

ಮಡಿಕೇರಿ ನ.22 : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಬೆಂಬಲಿತರ ಸಮಾವೇಶ ಮಡಿಕೇರಿಯಲ್ಲಿ ನಡೆಯಿತು.
ನಗರದ ಕ್ರಿಸ್ಟಲ್ ಕೋರ್ಟ್ ನಲ್ಲಿ ನಡೆದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷ ಸಂಘಟನೆಯಲ್ಲಿ ಕೊಡಗು ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವರುಗಳಾದ ಆರ್.ಅಶೋಕ್, ವಿ.ಸೋಮಶೇಖರ್, ಎಸ್.ಅಂಗಾರ, ವಿಧಾನ ಪರಿಷತ್ ಅಭ್ಯರ್ಥಿ ಸುಜಾಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಸೇರಿದಂತೆ ಜಿಲ್ಲೆಯ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.