ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ವೀರ್ ಚಕ್ರ ಪ್ರಶಸ್ತಿ ಪ್ರದಾನ

22/11/2021

ನವದೆಹಲಿ ನ.22 : ವಿಂಗ್ ಕಮಾಂಡರ್ ಹಾಲಿ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ವೀರ್ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದರು.
ಬಾಲಾಕೋಟ್ ವೈಮಾನಿಕ ದಾಳಿಯ ಒಂದು ದಿನದ ನಂತರ 2019ರ ಫೆಬ್ರವರಿ 27ರಂದು ವೈಮಾನಿಕ ಯುದ್ಧದ ಸಮಯದಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಇತ್ತೀಚಿಗೆ ಅವರು ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿಯನ್ನು ಪಡೆದಿದ್ದರು.