ಕೊಡಗಿನಲ್ಲಿ ಅಕಾಲಿಕ ಮಳೆ : ಬೆಳೆಹಾನಿ ಪರಿಶೀಲಿಸಿದ ಸಚಿವ ಆರ್.ಅಶೋಕ್

22/11/2021

ಮಡಿಕೇರಿ ನ.22 : ಮಳೆಯಿಂದಾಗಿ ಬೆಳೆ ಹಾನಿಯಾದ ಕೊಡಗಿನ ವಿವಿಧ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾರೂರು ಗ್ರಾಮದ ಪ್ರಕಾಶ್ ಎಂಬವರಿಗೆ ಸೇರಿದ ಎರಡು ಎಕರೆಗಳಷ್ಟು ಪ್ರದೇಶದಲ್ಲಿ ಮಳೆಯಿಂದಾಗಿ ಜೋಳದ ಬೆಳೆ ಹಾಳಾಗಿದ್ದನ್ನು ಖುದ್ದಾಗಿ ವೀಕ್ಷಿಸಿದರು. ನಂತರ ಚಿನ್ನೇನಹಳ್ಳಿಯ ಕುಮಾರ್ ಎಂಬವರಿಗೆ ಸೇರಿದ ಜಮೀನಿನಲ್ಲಿ ಮಳೆಯಿಂದಾಗಿ ಶುಂಠಿ ಬೆಳೆಗೆ ಕೂಳೆ ರೋಗ ಬಂದಿರುವುದನ್ನು ಗಮನಿಸಿದರು.NEWS DESK
ಜೋಳ ಮತ್ತು ಶುಂಠಿ ಬೆಳೆ ಹಾಳಾಗಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಬೆಳೆ ನಷ್ಟವಾದ ರೈತರಿಗೆ 15 ದಿನಗಳ ಒಳಗೆ ಪರಿಹಾರ ನೀಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಥಳದಲ್ಲಿದ್ದ ರೈತರಿಗೆ ತಿಳಿಸಿದರು.
ಜಿಲ್ಲೆಯ ವಿವಿಧೆಡೆ ಕಾಫಿ ತೋಟಗಳಿಗೂ ತೆರಳಿ ಬೆಳೆಹಾನಿಯ ಮಾಹಿತಿ ಪಡೆದರು.
ನಂತರ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ, ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.NEWS DESK
ನಂತರ ಸುದ್ಧಿಗಾರರೊಂದಿಗೆ ಮಾತನಾಡಿ ಅವರು ಚುನಾವಣಾ ಆಯೋಗದ ಅನುಮತಿ ಮೇರೆಗೆ ಇಂದು ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜೋಳ, ಶುಂಠಿ, ಕಾಫಿ ಬೆಳೆಗಳು ಹಾಳಾಗಿದ್ದು, ಆ ಸ್ಧಳಕ್ಕೆ ಸಂಬAಧಿಸಿದ ಅಧಿಕಾರಿಗಳು ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದು, ಅವರ ಜಾಗದಿಂದಲೇ ಆಪ್ ಲೋಡ್ ಮಾಡಿ ಬೆಳೆ ಹಾನಿಯಾದಷ್ಟು ಪರಿಹಾರವನ್ನು 15 ದಿನಗಳ ಒಳಗೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಖಾತೆಯಲ್ಲಿ 7ಕೋಟಿಯಷ್ಟು ಹಣ ಇದ್ದು, ಅದನ್ನು ಬಳಕೆ ಮಾಡುವ ಮೂಲಕ ರೈತರಿಗೆ ಪರಿಹಾರವನ್ನು ನೀಡಲಾಗುವುದು. ಅಲ್ಲದೆ ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಮೊದಲ ಹಂತವಾಗಿ ಒಂದು ಲಕ್ಷದಷ್ಟು ಹಣವನ್ನು ನೀಡಲಾಗುವುದು. ನಂತರ ಸಂಪೂರ್ಣ ಮಾಹಿತಿ ಅಧಾರದ ಮೇಲೆ ಮೂರು ಲಕ್ಷದವರೆಗೆ ಪರಿಹಾರವನ್ನು ನೀಡಲಾಗುವುದು ಎಂದರು.NEWS DESK
ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಳೆ ಹಾನಿಯ ಹೊರತು ಬೇರೆ ಯಾವ ವಿಷಯದ ಬಗ್ಗೆಯೂ ಸಚಿವ ಅಶೋಕ್ ಮಾತನಾಡಲು ನಿರಾಕರಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಸತೀಶ್, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಸೋಮವಾರಪೇಟೆ ತಾಲೂಕು ತಹಶೀಲ್ದಾರ ಗೋವಿಂದರಾಜ್, ಕುಶಾಲನಗರ ತಾಲೂಕು ತಹಶೀಲ್ದಾರ ಪ್ರಕಾಶ್, ಉಪ ತಹಶೀಲ್ದಾರ ಮಧುಸೂದನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾ ಶ್ರೀನಿವಾಸ, ಮಂಜುಳಾ, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯರಾದ ಭಾಸ್ಕರ್ ನಾಯಕ್, ಜಯಮ್ಮ, ಮಂಜುನಾಥ, ಪ್ರವೀಣ್, ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.NEWS DESK