ಮಡಿಕೇರಿ : ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

23/11/2021

ಮಡಿಕೇರಿ ನ.23 : ವಿಧಾನ ಪರಿಷತ್ ಚುನಾವಣೆಯಲ್ಲಿ ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್ ಗೌಡ ಕೊಡಗು ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಇಂದು ಅವರು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಿ ಜನ ಬೆಂಬಲದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯೆ ಶಾಂತೆಯoಡ ವೀಣಾಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಹೆಚ್.ಎಸ್.ಚಂದ್ರಮೌಳಿ, ಹಸೈನಾರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.