ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 61

23/11/2021

ಮಡಿಕೇರಿ ನ.23 : ಜಿಲ್ಲೆಯಲ್ಲಿ ಮಂಗಳವಾರ 1 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
      ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,416 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 34,924 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 431 ಮರಣ ಪ್ರಕರಣಗಳು ವರದಿಯಾಗಿದೆ. 61 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 11 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.09 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.