ಹುತಾತ್ಮ ಯೋಧ ಸಂತೋಷ್‌ ಬಾಬು ಅವರಿಗೆ ಮರಣೋತ್ತರ ಮಹಾವೀರ ಚಕ್ರ ಪ್ರದಾನ

23/11/2021

ನವದೆಹಲಿ ನ.23 : ಭಾರತ ಹಾಗೂ ಚೀನಾ ಯೋಧರ ಸಂಘರ್ಷದಲ್ಲಿ ಹುತಾತ್ಮರಾದ 16ನೇ ಬಿಹಾರ ಬೆಟಾಲಿಯನ್‌ನ ಕಮಾಂಡಿಂಗ್‌ ಆಫೀಸರ್‌ ಆಗಿದ್ದ ಸಂತೋಷ್‌ ಬಾಬು ಅವರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಎರಡನೇ ಅತೀ ದೊಡ್ಡ ಶೌರ್ಯ ಪ್ರಶಸ್ತಿಯಾದ ಮಹಾವೀರ ಚಕ್ರ ನೀಡಿ ಗೌರವಿಸಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿಯನ್ನು ಬಾಬು ಪತ್ನಿ ಬಿ ಸಂತೋಷಿ ಮತ್ತು ತಾಯಿ ಮಂಜುಳಾ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸೇನೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ವರ್ಷ ಜೂನ್ ನಲ್ಲಿ ಪೂರ್ವ ಲಡಾಖ್‌ನ ಗಲ್ವಾನ್‌ ಕಣಿವೆಯಲ್ಲಿ ಸಂತೋಷ್‌ ಬಾಬು ಹುತಾತ್ಮರಾಗಿದ್ದರು.