ಕಾನೂನು ಸಲಹೆಗಾರರನ್ನು ನೇಮಕ ಮಾಡಲು ಅರ್ಜಿ ಆಹ್ವಾನ

24/11/2021

ಮಡಿಕೇರಿ ನ.24 : ಕಂದಾಯ ಇಲಾಖೆಗೆ ಸಂಬoಧಿಸಿದ ವ್ಯಾಜ್ಯದಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಹೆಚ್ಚುವರಿ ಜಿಲ್ಲಾ ನ್ಯಾಯಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್‌ಎಲ್‌ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ತಹಶೀಲ್ದಾರ್/ ನಿವೃತ್ತ ಉಪ ತಹಶೀಲ್ದಾರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಸರ್ಕಾರದ ನಿಯಮಾವಳಿಗಳಂತೆ ಸಂಚಿತ ವೇತನ ಪಾವತಿಸಲಾಗುವುದು. ಆಸಕ್ತಿಯುಳ್ಳವರು ತಮ್ಮ ಸ್ವವಿವರಗಳನ್ನೊಳಗೊಂಡ ಪೂರ್ಣ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಡಿ.22 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾಧಿಕಾರಿ ಅವರ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.