ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಲಹಾ ಸಮಿತಿ ಪುನರ್ ರಚನೆ

24/11/2021

ಮಡಿಕೇರಿ ನ.24 : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪಿಸಲ್ಪಟ್ಟಿರುವ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಲಹಾ ಸಮಿತಿಯನ್ನು ಪುನರ್ ರಚಿನಲಾಗಿದೆ
ಮಂಗಳೂರು ವಿವಿ ಕುಲಪತಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ.ಪಾರ್ವತಿ ಅಪ್ಪಯ್ಯ, ನಿವೃತ್ತ ಪ್ರಾಂಶುಪಾಲರಾದ ಡಾ.ಪುಷ್ಪಾಕುಟ್ಟಣ್ಣ, ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕಿ ಡಾ.ಮೀನಾಕ್ಷಿ ಎಂ.ಎo, ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸದಸ್ಯ ಟಿ.ಎ.ಕಿಶೋರ್ ಕುಮಾರ್, ಬೆಂಗಳೂರು ಆರ್‌ಬಿಎಎನ್‌ಎಂ ಕಾಲೇಜ್ ನ ಸಹಾಯಕ ಪ್ರಾಧ್ಯಾಪಕ ಡಾ.ಅವಿನಾಶ್ ಪಿ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕುಲಸಚಿವರು ಸದಸ್ಯರುಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಮಂಗಳೂರು ವಿವಿ ಯ ಹಣಕಾಸು ಅಧಿಕಾರಿ ಖಾಯಂ ಆಹ್ವಾನಿತರಾಗಿರುತ್ತಾರೆ.