ಕೊಡಗಿನಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.0.13

25/11/2021

ಮಡಿಕೇರಿ ನ.25 : ಜಿಲ್ಲೆಯಲ್ಲಿ ಗುರುವಾರ 4 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 4 ಪ್ರಕರಣ ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 2, ಸೋಮವಾರಪೇಟೆ ತಾಲ್ಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ.
      ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,420 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 34,932 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 431 ಮರಣ ಪ್ರಕರಣಗಳು ವರದಿಯಾಗಿದೆ. 57 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 11 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.13 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.