ಮಡಿಕೇರಿ ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂವಿಧಾನ ದಿನಾಚರಣೆ

27/11/2021

ಮಡಿಕೇರಿ ನ.27 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಆಚರಿಸಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ತರಗತಿಗಳಲ್ಲಿ ಹಾಗೂ ಸಭೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಎನ್.ಸಿ.ಸಿ ಅಧಿಕಾರಿ ಮೇಜರ್ ಡಾ. ರಾಘವ. ಬಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಪ್ರಾಂಶುಪಾಲರಾದ ಡಾ. ಚೌರೀರ ಜಗತ್ ತಿಮ್ಮಯ್ಯ, ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕರಾದ ಡಾ. ಶಹಬರ್ ಪಾಷಾ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ರವಿಶಂಕರ್ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದು ಸಾಮೂಹಿಕವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.