ಮಡಿಕೇರಿ : ವಾರ್ಡ್ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ನಗರಸಭಾ ಸದಸ್ಯೆ

27/11/2021

ಮಡಿಕೇರಿ ನ.27 : ಮಡಿಕೇರಿ ನಗರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗಿದೆಯಾದರೂ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಮಾನ್ಯ ಸಭೆ ನಡೆದಿಲ್ಲ.
ಅಧಿಕಾರ ಇನ್ನೂ ಕೈಸೇರಿಲ್ಲವೆಂದು ಕೈಚೆಲ್ಲಿ ಕುಳಿತುಕೊಳ್ಳದ ವಾರ್ಡ್ ಸಂಖ್ಯೆ 18 ರ ನಗರಸಭಾ ಸದಸ್ಯೆ ಮಂಜುಳಾ ಅವರು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವ ಮೂಲಕ ಸ್ಥಳೀಯ ನಿವಾಸಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪುಟಾಣಿ ನಗರದ ಶ್ರೀ ದುರ್ಗಾಪರಮೇಶ್ವರಿ ದೇವಾಲಯ ವ್ಯಾಪ್ತಿಯಲ್ಲಿರುವ ಮನೆಗಳ ಬಳಿಯ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕಳಪೆ ಕಾಮಗಾರಿಯಾಗದಂತೆ ಮಂಜುಳಾ ನಿಗಾ ವಹಿಸುತ್ತಿದ್ದಾರೆ.
ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಪರಿಶೀಲಿಸಿದ ಅವರು ಸ್ವಚ್ಛತೆಯನ್ನು ಕಾಪಾಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೂಲಭೂತ ಸೌಲಭ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಹಂತ ಹಂತವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.