ಭಾರತೀಯ ಸಂಸ್ಕೃತಿ, ಕಲೆ ಹಾಗೂ ಧಾರ್ಮಿಕತ್ವದ ಪ್ರತೀಕ ಸ್ವಾಮಿನಾರಾಯಣ ಅಕ್ಷರಧಾಮ ದೇವಾಲ

30/11/2021

ದೆಹಲಿಯಲ್ಲಿರುವ ಅಕ್ಷರಧಾಮ ಅಥವಾ ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯವು ಭಾರತೀಯ ಸಂಸ್ಕೃತಿ, ಕಲೆ ಹಾಗೂ ಧಾರ್ಮಿಕತ್ವದ ಪ್ರತೀಕವಾಗಿದೆ. ಬೋಚಾಸನವಾಸಿ ಶ್ರೀ ಅಕ್ಷರಾ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥೆಯ ಧಾರ್ಮಿಕ ನಾಯಕರಾದ ಪ್ರಮುಖ ಸ್ವಾಮಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಸುಮಾರು 5 ವರ್ಷಗಳ ಅವಧಿಯಲ್ಲಿ ಈ ದೇವಾಲಯದ ಕಟ್ಟಡವನ್ನು ನಿರ್ಮಿಸಲಾಗಿದೆ. ಸಾಕಷ್ಟು ವಿಶಾಲವಾಗಿಯೂ ಹಾಗೂ ಸುಂದರವಾಗಿಯೂ ಈ ದೇವಾಲಯವನ್ನು ನಿರ್ಮಿಸಲಾಗಿದೆ. ಹಲವಾರು ಆಕರ್ಷಣೆಗಳನ್ನು ಈ ದೇವಾಲಯದಲ್ಲಿ ಕಾಣಬಹುದು.