ಮಡಿಕೇರಿ : ಡಿ.4 ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ

02/12/2021

ಮಡಿಕೇರಿ ಡಿ.2 : ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಯಾಗುತ್ತಿದ್ದು, ವಿವಿಧ ಪಕ್ಷಗಳಲ್ಲಿರುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದೆ ಬರುತ್ತಿದ್ದಾರೆ. ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕಾರ್ಯಕ್ರಮ ಡಿ.4 ರಂದು ಸಂಜೆ 5.30 ಗಂಟೆಗೆ ಮಡಿಕೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಪಕ್ಷದ ನಗರಾಧ್ಯಕ್ಷ ಬಿ.ವೈ.ರಾಜೇಶ್ ತಿಳಿಸಿದ್ದಾರೆ.