ಕೊಡಗು : ಡಿ.7 ರಂದು ಕ.ಸಾ.ಪ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ

03/12/2021

ಮಡಿಕೇರಿ ಡಿ.3 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಡಿ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಸುದರ್ಶನ ವೃತ್ತದ ಬಳಿಯಿರುವ ಎಸ್.ಜಿ.ಎಸ್.ಆರ್.ವೈ ಕಟ್ಟಡದ ಕ.ಸಾ.ಪ ಕಚೇರಿಯಲ್ಲಿ ನೂತನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಅಧಿಕಾರ ಹಸ್ತಾಂತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ, ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಭಾಗವಹಿಸಲಿದ್ದಾರೆ.