ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ವೈದ್ಯಕೀಯ ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ

03/12/2021

ಬೆಂಗಳೂರು ಡಿ.3 : ರಾಜ್ಯದಲ್ಲಿ ಕೋವಿಡ್ ಸೋಂಕು ಮತ್ತೆ ವ್ಯಾಪಿಸುವ ಆತಂಕ ಆರಂಭವಾಗಿರುವ ಬೆನ್ನಲ್ಲೇ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯಕೀಯ ಕಾಲೇಜುಗಳ ನಿರ್ದೇಶಕರೊಂದಿಗೆ ಆರೋಗ್ಯ ಸೌಧದಲ್ಲಿ ವೀಡಿಯೋ ಸಭೆ ನಡೆಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕೋವಿಡ್ ಸಂಭವನೀಯ 3ನೇ ಅಲೆಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ತೃತೀಯ ಹಂತದ ಆರೋಗ್ಯ ಸೇವೆ ನೀಡಲು 21 ವೈದ್ಯಕೀಯ ಕಾಲೇಜುಗಳಿದ್ದು, ಸಂಭವನೀಯ ಮೂರನೇ ಅಲೆ ಅಥವಾ ಹೊಸ ಓಮಿಕ್ರಾನ್ ವೈರಾಣು ಸಂಬoಧಿತ ಚಿಕಿತ್ಸೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ ಎಂದರು. ವೈದ್ಯಕೀಯ ಕಾಲೇಜುಗಳ ಹೆಚ್‌ಒಡಿ, ಪ್ರೊಫೆಸರ್, ಹಿರಿಯ ವೈದ್ಯರು ಸೇರಿದಂತೆ ಪ್ರತಿಯೊಬ್ಬರೂ ಸಮಯೋಚಿತವಾಗಿ ವರ್ತಿಸಬೇಕು. ಗೃಹ ವೈದ್ಯರು, ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿಗಳು ಸೇರಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಸಚಿವ ಡಾ.ಕೆ.ಸುಧಾಕರ್ ಹೇಳಿದರು.