ಭಾರೀ ಮಳೆಯಾಗಲಿದೆ

03/12/2021

ಬೆಂಗಳೂರು ಡಿ.3 : ಮತ್ತೆ ಅಕಾಲಿಕ ಮಳೆಯ ಆತಂಕ ಎದುರಾಗಿದ್ದು, ಬಂಗಾಳಕೊಲ್ಲಿಯಲ್ಲಿ ಜವಾದ್ ಚಂಡಮಾರುತವು ರೂಪುಗೊಳ್ಳಲಿದ್ದು, ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಚಂಡಮಾರುತದಿoದ ಭಾರೀ ಮಳೆಯಾಗಲಿದೆ.
ಶನಿವಾರ ಬೆಳಗ್ಗೆ ಆಂಧ್ರ ಪ್ರದೇಶದ ಉತ್ತರ ಭಾಗ ಮತ್ತು ಒಡಿಶಾದ ದಕ್ಷಿಣ ಕರಾವಳಿಯ ಸಮೀಪವಿರುವ ಪ್ರದೇಶವನ್ನು ತಲುಪುವ ನಿರೀಕ್ಷೆಯಿದೆ. ಈ ಎರಡೂ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಗಂಟೆಗೆ 50 ರಿಂದ 60 ಕಿಮೀ ವೇಗದಲ್ಲಿ 70 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರದಲ್ಲೂ ಮಳೆ ಹೆಚ್ಚಾಗಲಿದೆ. ಕರ್ನಾಟಕ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.