ಡಿ.6 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 65ನೇ ಪುಣ್ಯ ಸ್ಮರಣೆ

04/12/2021

ಮಡಿಕೇರಿ ಡಿ.4 :  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಿ.6 ರಂದು ಬೆಳಗ್ಗೆ 10.30 ಗಂಟೆಗೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 65 ನೇ ಪುಣ್ಯ ಸ್ಮರಣೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.