ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲಿಸೋಣ

06/12/2021

ಮಡಿಕೇರಿ ಡಿ.6 : ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಬೀದರ್ ನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವ ಜೊತೆಗೆ ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲಿಸೋಣ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕರೆ ನೀಡಿದರು.
ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಬಂಡೆಪ್ಪ ಕಾಶಂಪೂರ ಸೇರಿದಂತೆ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.