ಕೊಡಗು : ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ‘ಪರಿನಿರ್ವಾಣ ದಿನ’

06/12/2021

ಮಡಿಕೇರಿ ಡಿ.6 : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಪರಿನಿರ್ವಾಣ ದಿನ’ದ ಅಂಗವಾಗಿ ಕೊಡಗು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘ ಅಂಬೇಡ್ಕರ್ ಪುತ್ತಳಿಗೆ ಗೌರವ ಸಲ್ಲಿಸಿತು.
ಸೋಮವಾರಪೇಟೆ ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ, ಸಮಾನತೆಗಾಗಿ ಶ್ರಮಿಸಿದ ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ಪ್ರಸ್ತುತವೆಂದರು.
ಪ್ರಮುಖರಾದ ಸುರೇಶ್, ಪ್ರಸನ್ನ ಮತ್ತಿತರರು ಈ ಸಂದರ್ಭ ಹಾಜರಿದ್ದರು.