ಸೋಮವಾರಪೇಟೆ : ವಿವಿಧ ದಲಿತಪರ ಸಂಘಟನೆಗಳಿಂದ ಪರಿನಿರ್ವಾಣ ದಿನಾಚರಣೆ

06/12/2021

ಸೋಮವಾರಪೇಟೆ ಡಿ.6 : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಅಂಬೇಡ್ಕರ್ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿದರು. ದಲಿತ ಹಿತರಕ್ಷಣಾ ಒಕ್ಕೂಟ, ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಂವಿಧಾನ ಶಿಲ್ಪಿಯ ಕಾರ್ಯವನ್ನು ಶ್ಲಾಘಿಸಿದರು. ದಲಿತ ಹಿತರಕ್ಷಣಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಈ. ಜಯೇಂದ್ರ, ಗೌರವಾಧ್ಯಕ್ಷ ಜಯಪ್ಪ ಹಾನಗಲ್ಲು, ದಸಂಸ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಜೆ.ಆರ್. ಪಾಲಾಕ್ಷ ಮತ್ತಿತರರು ಇದ್ದರು.