ಡಿ.8 ರಿಂದ ಮದ್ಯ ಮಾರಾಟ ನಿಷೇಧ

07/12/2021

ಮಡಿಕೇರಿ ಡಿ.7 : ಭಾರತ ಚುನಾವಣಾ ಆಯೋಗದನ್ವಯ ಕರ್ನಾಟಕ ವಿಧಾನ ಪರಿಷತ್ತಿನ(ಸ್ಥಳೀಯ ಸಂಸ್ಥೆಗಳು) ದ್ವೈವಾರ್ಷಿಕ ಚುನಾವಣೆಯ ಮತದಾನವು ಡಿಸೆಂಬರ್, 10 ರಂದು ನಡೆಯಲಿದೆ.
ಈ ಹಿನ್ನೆಲೆ ಚುನಾವಣೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10-ಬಿ ಮತ್ತು ಅಬಕಾರಿ ಕಾಯ್ದೆ 1965ರ ಕಲಂ 21 ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 135(ಸಿ) ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ಡಿಸೆಂಬರ್, 08 ರ ಸಂಜೆ 4 ಗಂಟೆಯಿಂದ ಡಿಸೆಂಬರ್, 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.