ಕೊಡಗು ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರು

07/12/2021

ಮಡಿಕೇರಿ ಡಿ.7 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ರವರ ಜಿಲ್ಲಾ ಅಧ್ಯಕ್ಷ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ರವರು ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್ ರವರನ್ನು ಭೇಟಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ನೀಡುವಂತೆ ಕೋರಿದರು.
ಅಲ್ಲದೇ ಪರಿಷತ್ತಿಗೆ ಸುದರ್ಶನ ವಸತಿಗೃಹದ ಬಳಿ ಇರುವ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣದ ಕುರಿತು ಸಹಕಾರ ಕೋರಿದರು.
ಕನ್ನಡದ ಎಲ್ಲಾ ಚಟುವಟಿಕೆಗಳಿಗೆ ನನ್ನ ಸಂಪೂರ್ಣ ಸಹಕಾರ ಇರುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ನುಡಿದರು. ಕನ್ನಡ ಪರಿಷತ್ತಿನ ಭವನ ಕಟ್ಟುವ ಸಂದರ್ಭ ಜಿಲ್ಲಾಡಳಿತದಿಂದ  ಸಂಪೂರ್ಣ ಸಹಕಾರ ನೀಡುವುದಾಗಿ ನುಡಿದರು.
ಆ ಸಂದರ್ಭದಲ್ಲಿ ಕಸಾಪ ದ ನೂತನ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್,ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ‌ಟಿ.ಪಿ.ರಮೇಶ್, ಕೊಡಗು ಪತ್ರಿಕಾ ಭವನದ ಮ್ಯಾನೇಜಿಂಗ್ ಟ್ರಸ್ಟಿ. ಬಿ ಎನ್ ಮನುಶೆಣೈ ಸದಸ್ಯರಾದ  ಎಸ್.ಎಲ್.ಶಿವಣ್ಣ, ಚಂದನ್ ಕಾಮತ್, ರಾಜ್ಯ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಎಂ.ಎಸ್ ಶ್ರೀನಿವಾಸ್ ಉಪಸ್ಥಿತರಿದ್ದರು.