ಕೊಡಗಿನಲ್ಲಿ ಕೋವಿಡ್ : 1 ಸಾವು

08/12/2021

ಮಡಿಕೇರಿ ಡಿ.8  : ಜಿಲ್ಲೆಯಲ್ಲಿ ಬುಧವಾರ 30 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಬ್ಬರು  ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗಿನ ಸಾವಿನ ಸಂಖ್ಯೆ ಒಟ್ಟು 434 ಆಗಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,548 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
132 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 30 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1.08 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.