ಅಭಿವೃದ್ಧಿಗಾಗಿ ಸುಜಾಕುಶಾಲಪ್ಪರನ್ನು ಗೆಲ್ಲಿಸಿ : ಬಲ್ಲಾರಂಡ ಮಣಿಉತ್ತಪ್ಪ ಮನವಿ

08/12/2021

ಮಡಿಕೇರಿ ಡಿ.8 : ಸಮಾಜ ಸೇವೆಯ ಮೂಲಕ ಜನರ ಪ್ರೀತಿ ಗಳಿಸಿರುವ ಬಿಜೆಪಿ ಅಭ್ಯರ್ಥಿ ಸುಜಾಕುಶಾಲಪ್ಪ ಅವರನ್ನು ವಿಧಾನ ಪರಿಷತ್ ಗೆ ಗೆಲ್ಲಿಸಿ ಕಳುಹಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ನಿರೀಕ್ಷಿಸಬಹುದಾಗಿದೆ ಎಂದು ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವoತೆ ಮನವಿ ಮಾಡಿದ್ದಾರೆ. ಡಿ.10 ರಂದು ಸ್ಥಳೀಯ ಸಂಸ್ಥೆಗಳಿoದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಕೊಡಗು ಜಿಲ್ಲೆಯಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸುಜಾಕುಶಾಲಪ್ಪ ಅವರಿಗೆ ಮತ ನೀಡುವ ಮೂಲಕ ಜನಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದರು.
ಸಕ್ರಿಯ ರಾಜಕಾರಣದಲ್ಲಿರುವ ಸುಜಾ ಅವರು ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅರಿತಿದ್ದಾರೆ. ಅಲ್ಲದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರೆ. ಇವರ ಗೆಲುವಿನಿಂದ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದನೆ ದೊರೆಯಲಿದೆ ಎಂದು ತಿಳಿಸಿದರು. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಪ್ರಧಾನಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಅಭಿವೃದ್ಧಿಪರ ಚಿಂತನೆಯ ಬಲ ಹೆಚ್ಚಿಸಬೇಕು ಎಂದು ಮಣಿಉತ್ತಪ್ಪ ಕೋರಿದ್ದಾರೆ.