ರಕ್ಷಣಾ ಕೌಶಲ್ಯ ತರಬೇತುದಾರರಿಂದ ಅರ್ಜಿ ಆಹ್ವಾನ

08/12/2021

ಮಡಿಕೇರಿ ಡಿ.8 : ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ(ಪ್ರಸ್ತುತ ಕೆವಿಜಿ ಕಟ್ಟಡ ಭಾಗಮಂಡಲ) ಇಲ್ಲಿ 8 ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ(ಕರಾಟೆ) ನೀಡಲು ನುರಿತ ಅರ್ಹ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ಜಿಲ್ಲೆಯಲ್ಲಿ ಮಾನ್ಯತೆ ಪಡೆದ ಸ್ವಯಂ ರಕ್ಷಣಾ ಕೌಶಲ್ಯಗಳ ಸಂಸ್ಥೆಗಳಿಂದ ತರಬೇತಿ ಪಡೆದ ನುರಿತ ಮತ್ತು ಅರ್ಹ ಮಹಿಳಾ ತರಬೇತುದಾರರು ಅರ್ಜಿ ಸಲ್ಲಿಸಬಹುದು. ಆಸಕ್ತ ಸ್ವಯಂ ರಕ್ಷಣಾ ಕೌಶಲ್ಯ(ಕರಾಟೆ) ತರಬೇತುದಾರರು ಹೆಚ್ಚಿನ ಮಾಹಿತಿಗೆ ದೂ.ಸಂ. 08272-228985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಅವರು ತಿಳಿಸಿದ್ದಾರೆ.