ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ

08/12/2021

ಮಡಿಕೇರಿ ಡಿ.8 :  ಆಜಾದಿ ಕಾ ಅಮೃತ್ ಮಹೋತ್ಸವದ ಕಾರ್ಯಕ್ರಮವು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಸಾಂಸ್ಕೃತಿಕ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೇಜರ್ ವೆಂಕಟಗಿರಿ ರವರು ಆತ್ಮನಿರ್ಭರ್ ಭಾರತಯೆಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸ್ವಾವಲಂಬಿ ಭಾರತವಗಲು ವಿದ್ಯಾರ್ಥಿಗಳಲ್ಲಿ ಸತತ ಪ್ರಯತ್ನ, ಶ್ರಮ ಹಾಗೂ ಪ್ರಾಮಾಣಿಕತೆಯ ಅವಶ್ಯಕತೆಯಿದೆ ಎಂದು ಹೇಳಿದರು.

ಪ್ರಾಂಶುಪಾಲರಾದ ಡಾII ಟಿ. ಕೆ ಬೋಪ್ಪಯರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರಾರದ ವೇಣುಗೋಪಾಲ್ ಎಚ್.ಸ್ , ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಯಸ್ಥ ವಾಣಿಜ್ಯ ವಿಭಾಗ ಮತ್ತು ಶ್ರೀಮತಿ ಶೃತಿ ಪಾರ್ವತಿ ಬಿಎಸ್, ಸಾಂಸ್ಕೃತಿಕ ಸಮಿತಿ ಸಂಚಾಲಕರು ಹಾಗು ಸಹಾಯಕ ಪ್ರಾಧ್ಯಾಪಕರು, ಇತಿಹಾಸ ‌ವಿಭಾಗ ಉಪಸ್ಥಿತರಿದ್ದರು.