ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರಿಗೆ ಸೂಕ್ತ ಭದ್ರತೆ ನೀಡಿ : ಕಾಂಗ್ರೆಸ್ ಎಸ್‌ಸಿ ಘಟಕ ಒತ್ತಾಯ

08/12/2021

ಮಡಿಕೇರಿ ಡಿ.8 : ವಿಧಾನ ಪರಿಷತ್ ಚುನಾವಣೆಯ ಮತದಾನದ ಸಂದರ್ಭ ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಕಾಂಗ್ರೆಸ್ ಎಸ್‌ಸಿ ಘಟಕದ ಮಡಿಕೇರಿ ನಗರಾಧ್ಯಕ್ಷ ಬಿ.ಎನ್.ಮುದ್ದುರಾಜು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವು ನಿಶ್ಚಿತವಾಗುತ್ತಿರುವಂತೆಯೇ ನಿಯಮ ಬಾಹಿರವಾಗಿ ಮತ ಸೆಳೆಯಲು ಪ್ರತಿಸ್ಪರ್ಧಿಗಳು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರಲ್ಲಿ ಆತಂಕ ಮೂಡಿದೆ ಎಂದು ಆರೋಪಿಸಿದ್ದಾರೆ.
ಸ್ನೇಹಜೀವಿ ಹಾಗೂ ಅಭಿವೃದ್ಧಿ ಪರ ಆಸಕ್ತಿ ಹೊಂದಿರುವ ಡಾ.ಮಂತರ್ ಗೌಡರ ಪರ ಮತದಾರರು ಒಲವು ತೋರುತ್ತಿದ್ದು, ಇದನ್ನು ಸಹಿಸದ ಮಂದಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅವಕಾಶ ಕಲ್ಪಿಕೊಡಬೇಕೆಂದು ಮುದ್ದುರಾಜು ಮನವಿ ಮಾಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಣೆಗೆ ಕಟಿಬದ್ಧರಾಗಿ ಎಲ್ಲಾ ಮತದಾರರು ಧೈರ್ಯದಿಂದ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.