ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ನಡೆದ ಅರೆಭಾಷೆ ದಿನಾಚರಣೆ

16/12/2021

ಮಡಿಕೇರಿ ಡಿ.16 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಭಾರತೀಯ ವಿದ್ಯಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಉದ್ಘಾಟಿಸಿದರು.
ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಚಾಮರಾಜ ಜೋಡಿ ರಸ್ತೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪಟ್ಟಡ ಶಿವಕುಮಾರ್, ಮಡಿಕೇರಿ ನಗರಸಭಾ ಸದಸ್ಯ ಮಹೇಶ್ ಜೈನಿ, ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಹಾಗೂ ಅಕಾಡೆಮಿ ನಿರ್ದೇಶಕರು ಪಾಲ್ಗೊಂಡಿದ್ದರು.
ಸಭಾ ಕಾರ್ಯಕ್ರಮದ ನಂತರ ಎನ್.ಎಸ್.ದೇವಿಪ್ರಸಾದ್ ಅವರ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.