ಜ.ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ ಪ್ರಕರಣ : ರಕ್ಷಣಾ ಸಚಿವರಿಗೆ ತನಿಖಾ ವರದಿ ಸಲ್ಲಿಸಿದ ತನಿಖಾ ಸಮಿತಿ

05/01/2022

ನವದೆಹಲಿ ಜ.5 : ಸೇನಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 14 ಮಂದಿ ದುರಂತ ಅಂತ್ಯ ಕಾಣಲು ಕಾರಣವಾದ ಸೇನಾ ಹೆಲಿಕಾಪ್ಟರ್ ಅವಘಡ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ, ರಕ್ಷಣಾ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಹಾಗೂ ತನಿಖಾ ಸಮಿತಿ ಮುಖ್ಯಸ್ಥ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ತನಿಖಾ ವರದಿಯನ್ನು ಸಲ್ಲಿಸಿದರು.
ಡಿ.8 ರಂದು ತಮಿಳುನಾಡಿನ ಕೂನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 14 ಮಂದಿ ಮೃತಪಟ್ಟಿದ್ದರು. ರಷ್ಯಾ ಮೂಲದ ಮಿ-17ವಿ5 ಹೆಲಿಕಾಪ್ಟರ್ ದುರಂತಕ್ಕೀಡಾಗಿತ್ತು. ಈ ದುರಂತ ಹೇಗಾಯಿತು ಎಂದು ತ್ರಿಸೇವಾ ತನಿಖೆ ನಡೆಸಿತು.
ದುರಂತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಅವರ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಸಿಬ್ಬಂದಿ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಪೈಲಟ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಸೇರಿದಂತೆ 14 ಮಂದಿ ಮೃತಪಟ್ಟಿದ್ದರು.