ಪ್ರಧಾನಮಂತ್ರಿಗಳನ್ನು ನಡುರಸ್ತೆಯಲ್ಲಿ ನಿಲ್ಲುವಂತೆ ಮಾಡಲಾಗಿದೆ : ಸಂಸದ ಪ್ರತಾಪ್ ಸಿಂಹ ಅಸಮಾಧಾನ

05/01/2022

ಮೈಸೂರು ಜ.5 : ಪಂಜಾಬ್‌ ಕಾಂಗ್ರೆಸ್‌ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ಕಾರಿ ಕಾರ್ಯಕ್ರಮಕ್ಕೆ ತೆರಳದಂತೆ ಮಾಡಿದೆ. ಭದ್ರತೆಯ ನಿಯಮಗಳನ್ನು ಗಾಳಿಗೆ ತೂರಿ ದೇಶದ ಪ್ರಧಾನಿ ಒಬ್ಬರನ್ನು ಹಲವು ನಿಮಿಷಗಳ ಕಾಲ ನಡುರಸ್ತೆಯಲ್ಲಿ ನಿಲ್ಲಿಸಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂಜಾಬ್‌ ಸರ್ಕಾರದ ಈ ನಡೆ ಖಂಡನೀಯ ಎಂದು ತಿಳಿಸಿದ್ದಾರೆ.