ಮಂಗಳೂರು ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ : 26 ಮಂದಿ ಅಸ್ವಸ್ಥ

11/01/2022

ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಮಂಗಳವಾರ ವಿಷಾನಿಲ ಅಮೋನಿಯಂ ಸೋರಿಕೆಯಾಗಿ ಒಟ್ಟು 26 ಮಂದಿ ಅಸ್ವಸ್ಥರಾಗಿದ್ದಾರೆ.

ಘಟನೆಯಲ್ಲಿ ಅಸ್ವಸ್ಥರಾಗಿದ್ದ 26 ಸಿಬ್ಬಂದಿಗಳನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಕೆಲವರು ಬಿಡುಗಡೆಯಾಗಿದ್ದು, ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್‌ ಲಿಮಿಟೆಡ್’ ಸಂಸ್ಥೆಯಲ್ಲಿ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪಣಂಬೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.