ದಶಪಥ ಹೆದ್ದಾರಿ ನಿರ್ಮಾಣ : ದೇವಾಲಯಗಳ ಸ್ಥಳಾಂತರಕ್ಕೆ ಸಿದ್ಧತೆ

12/01/2022

ಮಡಿಕೇರಿ ಜ.12 : ರಾಜ್ಯದಲ್ಲಿ ದಶಪಥ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಬರುವ ಕಳಸ್ತವಾಡಿಯ ಆಂಜನೇಯ ದೇವಸ್ಥಾನ ಮತ್ತು ಶ್ರೀರಂಗಪಟ್ಟಣದ ಬಳಿ ಇರುವ ಗದ್ದೆ ರಂಗನಾಥ ಸ್ವಾಮಿ ದೇವಸ್ಥಾನವನ್ನು ಸ್ಥಳಾಂತರಿಸುವ ಕುರಿತು ಸಿದ್ಧತೆ ನಡೆದಿದೆ.
ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ದೇವಾಲಯಗಳ ಸ್ಥಳಾಂತರ ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.