ಪೊನ್ನಂಪೇಟೆ : ನಾಲ್ಕನೇ ಪತ್ನಿ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ

12/01/2022

ಮಡಿಕೇರಿ ಜ.12 : ಪತಿಯೇ ಪತ್ನಿ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷೇತ್ರ(35) ಎಂಬುವವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಸುಗುಣ ತಲೆಮರೆಸಿಕೊಂಡಿದ್ದಾನೆ.
ಈ ಕುರಿತು ಕ್ಷೇತ್ರ ಅವರು ಪತಿ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ಕ್ಷೇತ್ರ ಸುಗುಣನ ನಾಲ್ಕನೇ ಪತ್ನಿಯಾಗಿದ್ದು, ಐದನೇ ವಿವಾಹವಾಗಲು ಸುಗುಣ ಯತ್ನಿಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸುಗುಣ ತನ್ನನ್ನು ಯಾವುದೇ ಕ್ಷಣ ಕೊಲೆ ಮಾಡಬಹುದು ಎಂದು ಕ್ಷೇತ್ರ ಜೀವ ಭಯ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ತನಗೆ ಜೀವ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಅಳಲು ತೋಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊನ್ನಂಪೇಟೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.