ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ಮೊಟಕು

13/01/2022

ಬೆಂಗಳೂರು: ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ.

ಸರ್ಕಾರದ ಆದೇಶ ಮತ್ತು ಹೈಕೋರ್ಟ್‌ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಕೊರೋನಾ ಸೋಂಕು ತಗ್ಗಿದ ನಂತರ ಮತ್ತೆ ಮುಂದುವರಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ನಾಯಕರ 11 ದಿನಗಳ ಮೇಕೆದಾಟು ಪಾದಯಾತ್ರೆ 5ನೇ ದಿನಕ್ಕೆ ಅಂತ್ಯವಾಗಿದೆ.